Authors
Claim
ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ
Fact
ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ ಒಬ್ಬರು ರೈತರಿಗೆ ದೌರ್ಜನ್ಯ ನಡೆಸಿದ ಪ್ರಕರಣ ಹಳೆಯದಾಗಿದ್ದು, ಈಗಿನದ್ದಲ್ಲ.
ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ದೌರ್ಜನ್ಯ ನಡೆದಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಫೇಸ್ಬುಕ್ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ರೈತರಿಗೆ ಅನ್ಯಾಯ” ಎಂದು ಹೇಳಲಾಗಿದ್ದು, ಇದರೊಂದಿಗೆ ವೀಡಿಯೋವೊಂದನ್ನು ಲಗತ್ತಿಸಲಾಗಿದೆ.
ಈ ವಿಚಾರದ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಹಳೆಯ ವೀಡಿಯೋ ಎಂದು ತಿಳಿದುಬಂದಿದೆ.
Fact Check/Verification
ಸತ್ಯಶೋಧನೆಗಾಗಿ ನಾವು ಗೂಗಲ್ ಕೀವರ್ಡ್ ಸರ್ಚ್ ನಡೆಸಿದ್ದು ಈ ವೇಳೆ, ಮಾಧ್ಯಮ ವರದಿಗಳು ಲಭ್ಯವಾಗಿವೆ.
ಜನವರಿ 15, 2022ರ ವಿಜಯವಾಣಿ ವರದಿಯ ಪ್ರಕಾರ, “ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ದೌರ್ಜನ್ಯ ಎಸಗಿದ್ದ ರೀಲರ್ ವಿರುದ್ಧ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರ ಸೂಚನೆಯಂತೆ ಕೇಸ್ ದಾಖಲಾಗಿದೆ. ಜನವರಿ 13 ರಂದು ಹಾವೇರಿ ಮೂಲದ ವಿರೂಪಾಕ್ಷಪ್ಪ ಎಂಬವರು ರಾಮನಗರ ಮಾರುಕಟ್ಟೆಗೆ ರೇಷ್ಮೆಗೂಡನ್ನು ತಂದಿದ್ದರು. ಹರಾಜಿನಲ್ಲಿ ರೇಷ್ಮೆ ಗೂಡು ಖರೀದಿಸಿದ್ದ ಮುನೀರ್ ಅಹ್ಮದ್ ಎಂಬ ರೀಲರ್ ರೈತನ ಮೇಲೆ ದೌರ್ಜನ್ಯ ಎಸಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮಕಿ ಹಾಕಿದ್ದ ವೀಡಿಯೋ ವೈರಲ್ ಆಗಿತ್ತು. ಇದು ಗಮನಕ್ಕೆ ಬರುತ್ತಿದ್ದಂತೆ ಸಚಿವರು ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದರು ಎಂದಿದೆ”
ಜನವರಿ 15, 2022ರ ವಾರ್ತಾಭಾರತಿ ವರದಿ ಪ್ರಕಾರ, “ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ದೌರ್ಜನ್ಯ ಎಸಗಿದ್ದ ರೀಲರ್ ವಿರುದ್ಧ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರ ಸೂಚನೆಯಂತೆ ಕೇಸ್ ದಾಖಲಾಗಿದೆ” ಎಂದಿದೆ.
ಈ ಸುದ್ದಿಯ ಅನ್ವಯ, ನ್ಯೂಸ್ಚೆಕರ್ ರಾಮನಗರ ಟೌನ್ ಸರ್ಕಲ್ ವ್ಯಾಪ್ತಿಯ ಐಜೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದು, ಈ ವೇಳೆ ಘಟನೆಯ ಎಫ್ಐಆರ್ ಸಂಖ್ಯೆ 0001/2022 ಎಂದು ತಿಳಿಸಿದ್ದಾರೆ.
ಇದರನ್ವಯ ನಾವು ಎಫ್ಆರ್ ಪ್ರತಿಯನ್ನು ಪಡೆದುಕೊಂಡಿದ್ದು ಅದು ಇಲ್ಲಿದೆ. ಇದರ ಪ್ರಕಾರ ಮಾರುಕಟ್ಟೆಯಲ್ಲಿ ಗಲಾಟೆ ನಡೆದಿದೆ ಎಂದಿದ್ದು ರೇಷ್ಮೆ ರೈತನ ಮೇಲೆ ದೌರ್ಜನ್ಯ ಎಸಗಿರುವುದನ್ನು ಹೇಳಲಾಗಿದೆ.
ಇನ್ನು ಈ ವೈರಲ್ ವೀಡಿಯೋಕ್ಕೆ ಸಂಬಂಧಿಸಿದಂತೆ ಈ ವೀಡಿಯೋ ಹಳೆಯದ್ದು ಈಗಿನದ್ದಲ್ಲ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್ನಲ್ಲಿ ವೀಡಿಯೋ ಜನವರಿ 12, 2022 ರಂದು ಹರಿಪ್ರಸಾರ್ ಕುರುಬಾಸ್ ಎಂಬ ಖಾತೆಯಿಂದ ಹಂಚಿಕೆಯಾಗಿದ್ದು, ಹಳೆಯ ವೀಡಿಯೋವಾಗಿದೆ ಎಂದು ಹೇಳಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ ವಿಜಯವಾಣಿ ವರದಿಗಾರ ಗಂಗಾಧರ ಅವರನ್ನು ನ್ಯೂಸ್ಚೆಕರ್ ಸಂಪರ್ಕಿಸಿದ್ದು, “2022 ಜನವರಿಯಲ್ಲಿ ಹಲ್ಲೆ ಪ್ರಕರಣ ವರದಿಯಾಗಿತ್ತು. ವೀಡಿಯೋ ಈಗಿನದ್ದಲ್ಲ ಎಂದು ಖಚಿತಪಡಿಸಿದ್ದಾರೆ.
Conclusion
ಈ ಸತ್ಯಶೋಧನೆಯ ಪ್ರಕಾರ, ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ ಎಂಬ ವೀಡಿಯೋ ಹಳೆಯದಾಗಿದ್ದು ಈಗಿನದ್ದಲ್ಲ ಎಂದು ತಿಳಿದುಬಂದಿದೆ.
Result: Missing context
Our Sources
Report By Vijayavani, Dated: January 15, 2023
Report By Vartha bharati, Dated: January 15, 2023
Tweet By Ramanagara District Police, Dated: August 10, 2023
FIR Copy of Ijoor PS, Dated: January 14, 2022
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.