Authors
Claim
ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ಈ ಕುರಿತು ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ ಮುರ್ಮು ಇವರು ರಾಮಾಯಣವನ್ನು ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದಿವಾಸಿ ಜನಾಂಗಕ್ಕೆ ಸೇರಿದವರು. ವಿಪರ್ಯಾಸವೆಂದರೆ ಇವರನ್ನು ಅಯೋಧ್ಯೆಯ ದೇಗುಲದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ” ಎಂದಿದೆ.
ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ಗೆ ವಾಟ್ಸಾಪ್ ಟಿಪ್ ಲೈನ್ ಮೂಲಕ ವಿನಂತಿಸಿದ್ದು, ಅದನ್ನು ತನಿಖೆಗಾಗಿ ಸ್ವೀಕರಿಸಿದ್ದೇವೆ.
Also Read: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹50 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?
Fact
ಸತ್ಯಶೋಧನೆಗಾಗಿ ನಾವು ಮೊದಲು ಗೂಗಲ್ ಕೀವರ್ಡ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿವಿಧ ಮಾಧ್ಯಮಗಳಲ್ಲಿ ರಾಷ್ಟ್ರಪತಿ ಮುರ್ಮು ಅವರಿಗೆ ಅಯೋಧ್ಯೆ ದೇಗುಲ ಟ್ರಸ್ಟ್ ಆಹ್ವಾನ ಕೊಟ್ಟಿದ್ದರ ಬಗ್ಗೆ ವರದಿಗಳನ್ನು ಗಮನಿಸಿದ್ದೇವೆ.
ಜನವರಿ 12, 2024ರ ದಿ ಹಿಂದೂ ವರದಿ ಪ್ರಕಾರ, ರಾಮ ದೇಗುಲದ ಪ್ರಾಣ ಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನವರಿ 12ರಂದು ಆಹ್ವಾನ ನೀಡಲಾಗಿದೆ. ರಾಮ ಮಂದಿರ ನಿರ್ಮಾಣ ಸಮಿತಿಯ ನೃಪೇಂದ್ರ ಮಿಶ್ರಾ ಮತ್ತು ವಿಶ್ವಹಿಂದೂ ಪರಿಷತ್ ನ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಅವರು ಮತ್ತು ಅವರೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಇಬ್ಬರು, ರಾಷ್ಟ್ರಪತಿಯವರನ್ನು ಪ್ರತಿಷ್ಠಾಪನೆಗೆ ಆಹ್ವಾನಿಸಿದ್ದಾರೆ ಎಂದಿದೆ.
ಈ ಬಗ್ಗೆ ಹಲವು ಮಾಧ್ಯಮಗಳು ವರದಿ ಮಾಡಿದ್ದು ಅವುಗಳನ್ನು ಇಲ್ಲಿ, ಇಲ್ಲಿ, ನೋಡಬಹುದು.
ಈ ಬಗ್ಗೆ ನಾವು ಎಕ್ಸ್ ತಾಣದಲ್ಲಿಯೂ ಪರಿಶೀಲನೆ ನಡೆಸಿದ್ದು, ಫಲಿತಾಂಶಗಳು ಲಭ್ಯವಾಗಿವೆ.
ಜನವರಿ 12, 2024ರಂದು ಎಎನ್‌ಐ ತನ್ನ ಎಕ್ಸ್ ಪೋಸ್ಟ್ ನಲ್ಲಿ ಅಯೋಧ್ಯೆ ರಾಮ ದೇಗುಲದ ಪ್ರಾಣ ಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಯಿತು ಎಂದು ವಿವರಿಸಿದೆ. ಈ ಟ್ವೀಟ್ ಇಲ್ಲಿದೆ.
ಜನವರಿ 12, 2024ರಂದು ವಿಶ್ವಹಿಂದೂ ಪರಿಷತ್ ಎಕ್ಸ್ ನಲ್ಲಿ ಮಾಡಿದ ಟ್ವೀಟ್ ಅನ್ನೂ ನಾವು ನೋಡಿದ್ದೇವೆ. ಇದರಲ್ಲಿ ರಾಷ್ಟ್ರಪತಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿದ್ದಾಗಿ ಹೇಳಿದೆ.
ಈ ಸತ್ಯಶೋಧನೆಯ ಪ್ರಕಾರ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಯೋಧ್ಯೆ ರಾಮ ಮಂದಿರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎನ್ನುವುದು ಸುಳ್ಳಾಗಿದೆ.
Also Read: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?
Result: False
Our Sources:
Report By The Hindu, Dated: January 12, 2024
Tweet By ANI, Dated: January 12, 2024
Tweet By Vishwa Hindu Parishad, Dated: 12, 2024
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.