Authors
ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ವೀಡಿಯೋ ವೈರಲ್ ಆಗಿದ್ದು ಅದರಲ್ಲಿ ಆರೋಪಿ ಸೇರಿದಂತೆ ಇನ್ನೊಬ್ಬನೂ ಇದ್ದಾನೆ ಎಂದು ಹೇಳಲಾಗಿದೆ. ಈ ಕುರಿತ ವೀಡಿಯೋವನ್ನು ನ್ಯೂಸ್‌ಎಕ್ಸ್ ಚಾನೆಲ್ ಸೇರಿದಂತೆ ಹಲವು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ನ್ಯೂಸ್ ಎಕ್ಸ್‌ನ ಈ ಪೋಸ್ಟ್‌ನಲ್ಲಿ “ಮಂಗಳೂರು ಸ್ಫೋಟ ಪ್ರಕರಣ ಒಂದು ತಿರುವು ತೆಗೆದುಕೊಂಡಿದ್ದು, ಸಿಸಿಟಿವಿ ವೀಡಿಯೋ ಆರೋಪಿ ಶಾರಿಕ್ ಜೊತೆ ಇನ್ನೊಬ್ಬ ಇರುವುದನ್ನು ತೋರಿಸುತ್ತದೆ. ಇದರಿಂದ ಶಂಕಿತ ಆ ವ್ಯಕ್ತಿ ಎಲ್ಲಿದ್ದಾನೆ ಎಂಬುದು ಪ್ರಶ್ನೆಯಾಗಿದೆ” ಎಂದು ಹೇಳಿದೆ.
Fact Check
ದೃಶ್ಯಾವಳಿಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ನಾವು ವೈರಲ್ ವೀಡಿಯೋದ ಕೀ ಫ್ರೇಂಗಳ ಮೂಲಕ ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದೇವೆ. ಆದರೆ ನಂಬಲರ್ಹವಾದ ಯಾವುದನ್ನೂ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಅಲ್ಲದೇ ಈ ವೀಡಿಯೋ ನಿಜವಾಗಿಯೂ ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ್ದೇ ಎಂಬ ಸಂಶಯವನ್ನೂ ಇದು ಹುಟ್ಟುಹಾಕುತ್ತದೆ.
ಈ ದೃಶ್ಯಾವಳಿಯ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಟ್ವಿಟರ್ ಮೂಲಕ ನೀಡಿದ ಸ್ಪಷ್ಟನೆ ಲಭ್ಯವಾಗಿದೆ. ಆ ಪ್ರಕಾರ “ಇಬ್ಬರು ವ್ಯಕ್ತಿಗಳು ಬ್ಯಾಗ್‌ನೊಂದಿಗೆ ಓಡಾಡುತ್ತಿರುವ ದೃಶ್ಯವಿರುವ ಮತ್ತು ಇವರು ಮಂಗಳೂರು ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬ ಸುದ್ದಿಯ ವೀಡಿಯೋಕ್ಕೆ ಮತ್ತು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋಕ್ಕೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.
ಕರ್ನಾಟಕದ ಕಾನೂನು ಸುವ್ಯವಸ್ಥೆ ಕುರಿತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಕುಮಾರ್ ಅವರೂ ಕೂಡ ಟ್ವೀಟ್ ಮಾಡಿದ್ದು, ಈ ದೃಶ್ಯಾವಳಿಯಲ್ಲಿ ಕಾಣುತ್ತಿರುವ ವ್ಯಕ್ತಿಗಳಿಗೂ ಮಂಗಳೂರು ಸ್ಫೋಟ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Conclusion
ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವೀಡಿಯೋದ ಕುರಿತ ಸುದ್ದಿಯು ಸುಳ್ಳಾಗಿದೆ.
Result: False
Our Sources
Twitter post By N.Shashikumar, Mangalore city police commissioner
Twitter post By Alok kumar, Additional Director General of Police, Law & Order, Karnataka
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.