Authors
Claim
ರಾಮ ಮಂದಿರ ಲೋಕಾರ್ಪಣೆ ಬಳಿಕ ಯುಎಇ ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆ ಎಂದು ಫೋಟೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ಖಾತೆಯಲ್ಲಿ ಈ ಫೋಟೋ ಕಂಡುಬಂದಿದೆ.
Also Read: ಅಯೋಧ್ಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎನ್ನುವುದು ನಿಜವೇ?
ಎಕ್ಸ್ ಖಾತೆಯ ಪೋಸ್ಟ್ ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು.
ಇದೇ ರೀತಿಯ ವರದಿಗಳನ್ನು ಜನವರಿ 23, 2023ರಂದು ವಿಜಯವಾಣಿ ಮತ್ತು ಉದಯವಾಣಿ ಪತ್ರಿಕೆಗಳು ಪ್ರಕಟಿಸಿದ್ದು, ಬುರ್ಜ್ ಖಲೀಫಾದಲ್ಲಿ ರಾಮನ ಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಹೇಳಿವೆ. ಅವುಗಳನ್ನು ಇಲ್ಲಿ ನೋಡಬಹುದು.
ನ್ಯೂಸ್‌ಚೆಕರ್ ಇದರ ಬಗ್ಗೆ ಸತ್ಯಶೋಧನೆ ನಡೆಸಿದ್ದು ಇದು ಸುಳ್ಳು ಎಂದು ಕಂಡುಬಂದಿದೆ.
Fact
ಸತ್ಯಶೋಧನೆಗಾಗಿ ನಾವು ವೈರಲ್ ಫೊಟೋದ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿವಿಧ ಸಂದರ್ಭಗಳಲ್ಲಿ ಈ ಚಿತ್ರವನ್ನು ಬೇರೆ ಬೇರೆ ಜಾಲತಾಣಗಳಲ್ಲಿ ಹಂಚಿಕೊಂಡಿರುವುದನ್ನು ಗಮನಿಸಿದ್ದೇವೆ.
ಈ ಫಲಿತಾಂಶದ ಪ್ರಕಾರ juliasalbum ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ಗಮನಿದ್ದೇವೆ. ಈ ಚಿತ್ರ ವೈರಲ್ ಚಿತ್ರಕ್ಕೆ ಅನೇಕ ಹೋಲಿಕೆಗಳನ್ನು ಹೊಂದಿವೆ.
ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಇಂತಹ ಚಿತ್ರವನ್ನೇನಾದರೂ ಕಟ್ಟದಲ್ಲಿ ಪ್ರದರ್ಶಿಸಲಾಗಿದೆಯೇ ಎಂಬ ಬಗ್ಗೆ ನಾವು ಬುರ್ಜ್ ಖಲೀಫಾದ ಅಧಿಕೃತ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಖಾತೆಗಳನ್ನು ಪರಿಶೀಲಿಸಿದ್ದೇವೆ. ಈ ಹಿಂದೆ ವಿವಿಧ ಸಂದರ್ಭಗಳಲ್ಲಿ ಚಿತ್ರಗಳನ್ನು ಪ್ರದರ್ಶಿಸಿದ ವೇಳೆ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಸಂಪ್ರದಾಯವನ್ನು ಕಟ್ಟಡ ಪ್ರಾಧಿಕಾರ ಮಾಡಿತ್ತು. ಆದರೆ ಈಗ ರಾಮನ ಚಿತ್ರವನ್ನು ಪ್ರದರ್ಶಿಸಿದ ಬಗ್ಗೆ ಯಾವುದೇ ಪೋಸ್ಟ್ ಗಳು ಕಂಡುಬಂದಿಲ್ಲ.
ಆದ್ದರಿಂದ ಈ ಸತ್ಯಶೋಧನೆ ಪ್ರಕಾರ, ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆ ಎನ್ನುವುದು ಸುಳ್ಳಾಗಿದೆ.
Also Read: ಅಯೋಧ್ಯೆ ಆಗಸದಲ್ಲಿ ಡ್ರೋನ್ ಮೂಲಕ ರಾಮನ ಚಿತ್ರವನ್ನು ಸೃಷ್ಟಿಸಲಾಗಿದೆಯೇ?
Result: False
Our Sources:
Google reverse image search
Website, juliasalbum.com
Facebook page of Burj Khalifa
Instagram page of Burj Khalifa
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.