Newchecker.in is an independent fact-checking initiative of NC Media Networks Pvt. Ltd. We welcome our readers to send us claims to fact check. If you believe a story or statement deserves a fact check, or an error has been made with a published fact check
Contact Us: checkthis@newschecker.in
Fact Check
Claim
ಕೆನಡಾ ಪ್ರಧಾನಿ ಅಭ್ಯರ್ಥಿ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಬಳಿಕ ಕನ್ನಡದಲ್ಲಿ ಮಾತನಾಡಿದ್ದಾರೆ
Fact
ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ ಬಳಿಕ ಚಂದ್ರ ಆರ್ಯ ಅವರು ಕನ್ನಡದಲು ಮಾತನಾಡಿದ್ದಲ್ಲ, 2022ರಲ್ಲಿ ಅವರು ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ್ದರು
ಕೆನಡಾ ಪ್ರಧಾನಿ ಹುದ್ದೆ ರೇಸ್ ನಲ್ಲಿರುವ ತುಮಕೂರು ಮೂಲದ ಚಂದ್ರ ಆರ್ಯ ಅವರು ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ ಬಳಿಕ ಕೆನಡಾ ಸಂಸತ್ ಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದ್ದಾರೆ ಎಂದು ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ.
ಈ ಕುರಿತಾಗಿ ಕನ್ನಡಪ್ರಭ, ವಾರ್ತಾಭಾರತಿ ವೆಬ್ ಸೈಟ್ ಗಳು ಈ ಕುರಿತ ವರದಿಯನ್ನು ಪ್ರಕಟಿಸಿದೆ. ಇದರಲ್ಲಿ “ಭಾರತ ಮೂಲದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಬಳಿಕ ಅವರು ಕನ್ನಡದಲ್ಲಿಯೇ ಮಾತನಾಡಿದ್ದು ಸುದ್ದಿಯಾಗಿದೆ.” ಎಂದು ವರದಿಯನ್ನು ಪ್ರಕಟಿಸಿವೆ.
Also Read: ಮಹಾಕುಂಭ ಮೇಳದಲ್ಲಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ ಎನ್ನುವುದು ನಿಜವೇ?


ಇದೇ ರೀತಿಯ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿರುವುದನ್ನು ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಬಳಿಕ ಪಬ್ಲಿಕ್ ಟಿವಿ ಸೇರಿದಂತೆ ಹಲವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.



ಈ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.
ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದಾಗ ಇದು ಹಳೆಯ ವೀಡಿಯೋ, ಈಗಿನದ್ದಲ್ಲ ಎಂದು ಗೊತ್ತಾಗಿದೆ.
ಸತ್ಯಶೋಧನೆ ನಡೆಸುವ ವೇಳೆ ನಾವು ಮೊದಲು ಚರ್ಕವರ್ತಿ ಸೂಲಿಬೆಲೆ ಅವರು ಮಾಡಿರುವ ಪೋಸ್ಟ್ ಗಮನಿಸಿದ್ದೇವೆ. ಈ ವೇಳೆ ಬಳಕೆದಾರರೊಬ್ಬರು ಅವರಿಗೆ ಪ್ರತಿಕ್ರಿಯೆ ನೀಡಿದ್ದು ಇದು ಹಳೆಯ ವೀಡಿಯೋ ಎಂದು ಹೇಳಿದ್ದಾರೆ.
ಆ ಪ್ರಕಾರ ನಾವು ಗೂಗಲ್ ನಲ್ಲಿ ಪರಿಶೀಲನೆ ನಡೆಸಿದಾಗ, ಮೇ 20, 2022ರ ಬ್ಯುಸಿನೆಸ್ ಟುಡೇ ವರದಿಯ ಪ್ರಕಾರ, ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಸಂಸತ್ತಿನಲ್ಲಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದರು. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ನೆಟಿಜನ್‌ಗಳು ಅವರನ್ನು ಶ್ಲಾಘಿಸಿದ್ದಾರೆ. ಭಾರತದಿಂದ ಹೊರಗಿರುವ ವಿಶ್ವದ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಅವರು ಹೇಳಿದ್ದಾರೆ ಎಂದಿದೆ.

ಮೇ 21, 2022ರ ದಿ ಇಂಡಿಯನ್ ಎಕ್ಸ್ ಪ್ರೆಸ್ ಯೂಟ್ಯೂಬ್ ಚಾನೆಲ್ ನಲ್ಲಿ “Canadian MP Chandra Arya from Karnataka speaks in Kannada in Parliament” ಶೀರ್ಷಿಕೆಯಡಿ ವೈರಲ್ ವೀಡಿಯೋವನ್ನು ಹೋಲುವ ವೀಡಿಯೋ ಅಪ್ ಲೋಡ್ ಮಾಡಲಾಗಿದ್ದು, “ಭಾರತೀಯ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಗುರುವಾರ ಕೆನಡಾ ಸಂಸತ್ತಿನಲ್ಲಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದರು. ತಮ್ಮ ಅನುಭವದ ಕ್ಲಿಪ್ ಅನ್ನು ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ” ಎಂದಿದೆ.
ನಾವು ಕರ್ನಾಟಕದ ತುಮಕೂರಿನ ಶಿರಾ ಮೂಲದ ಲಿಬರಲ್ ಪಕ್ಷದ ಸಂಸದರಾದ ಚಂದ್ರ ಆರ್ಯ ಅವರ ಎಕ್ಸ್ ಖಾತೆಯನ್ನು ಪರಿಶೀಲಿಸಿದ್ದೇವೆ. ಮೇ.20, 2022ರಂದು ಅವರು ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
ಈ ಫೋಸ್ಟ್ ನಲ್ಲಿ ಚಂದ್ರ ಆರ್ಯ ಅವರು, “ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರವಾದ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು.” ಎಂದಿದ್ದಾರೆ.
ಈ ಸತ್ಯಶೋಧನೆಯ ಪ್ರಕಾರ, ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ ಬಳಿಕ ಚಂದ್ರ ಆರ್ಯ ಅವರು ಕನ್ನಡದಲು ಮಾತನಾಡಿದ್ದಲ್ಲ, 2022ರಲ್ಲಿ ಅವರು ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ್ದರು ಎಂದು ಗೊತ್ತಾಗಿದೆ.
Our Sources
Report By Business Today, Dated: May 20, 2022
YouTube Video By The Indian Express, Dated: May 21, 2022
X post By Chandra Arya, Dated: May 20, 2022
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.