Authors
Claim
ಅಮೇಥಿಯಿಂದ ಪ್ರಿಯಾಂಕಾ, ರಾಯ್ ಬರೇಲಿಯಿಂದ ರಾಹುಲ್ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ
Fact
ಅಮೇಥಿಯಿಂದ ಪ್ರಿಯಾಂಕಾ, ರಾಯ್ ಬರೇಲಿಯಿಂದ ರಾಹುಲ್ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ ಎನ್ನುವುದು ಸುಳ್ಳು, ವೈರಲ್ ಪತ್ರವು ನಕಲಿಯಾಗಿದೆ
ಉತ್ತರ ಪ್ರದೇಶದ ಅಮೇಥಿಯಿಂದ ಪ್ರಿಯಾಂಕಾ ಗಾಂಧಿ ಮತ್ತು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಅವರ ಉಮೇದುವಾರಿಕೆಯನ್ನು ಘೋಷಿಸಲಾಗಿದೆ ಎಂಬಂತೆ ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಆದಾಗ್ಯೂ, ವೈರಲ್ ಪತ್ರ ನಕಲಿ ಎಂದು ನಮ್ಮ ತನಿಖೆಯಲ್ಲಿ ನಾವು ಕಂಡುಕೊಂಡಿದ್ದೇವೆ. ಈ ವರದಿಯನ್ನು ಬರೆಯುವ ಸಮಯದವರೆಗೆ ಕಾಂಗ್ರೆಸ್ ಪಕ್ಷವು ಎರಡೂ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಿಸಿಲ್ಲ.
ಉತ್ತರ ಪ್ರದೇಶದ ಎರಡು ಪ್ರಮುಖ ಲೋಕಸಭಾ ಕ್ಷೇತ್ರಗಳಾದ ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಮೇ 20 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ಎರಡು ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ಅದೇ ಸಮಯದಲ್ಲಿ, ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ಅವರನ್ನೇ ಅಮೇಥಿಯಿಂದ ಅಭ್ಯರ್ಥಿಯನ್ನಾಗಿ ಮಾಡಿದೆ, ಆದರೆ ಪಕ್ಷವು ರಾಯ್ ಬರೇಲಿ ಕ್ಷೇತ್ರದಿಂದ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಲೆಟರ್ ಹೆಡ್ ಅನ್ನು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ ಮತ್ತು ಇದರ ಬಿಡುಗಡೆಯ ದಿನಾಂಕ 30 ಏಪ್ರಿಲ್ 2024 ಆಗಿದೆ. ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಪ್ರಿಯಾಂಕಾ ಗಾಂಧಿ ಮತ್ತು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಇದ್ದಾರೆ.
Also Read: ಗುಜರಾತ್ ಅದಾನಿ ಬಂದರಿನಲ್ಲಿ ಟ್ರಕ್ ಗಳಲ್ಲಿ ಹಸುಗಳನ್ನು ಅರಬ್ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?
Fact Check/ Verification
ವೈರಲ್ ಪತ್ರದ ಬಗ್ಗೆ ತನಿಖೆ ನಡೆಸಲು ನ್ಯೂಸ್ ಚೆಕರ್ ಮೊದಲು ಕಾಂಗ್ರೆಸ್ ಪಕ್ಷದ ಅಧಿಕೃತ ಎಕ್ಸ್ ಹ್ಯಾಂಡಲ್ ಅನ್ನು ಶೋಧನೆ ನಡೆಸಿದೆ. ಈ ಸಮಯದಲ್ಲಿ ರಾಹುಲ್ ಅಥವಾ ಪ್ರಿಯಾಂಕಾ ಗಾಂಧಿ ಅವರ ಉಮೇದುವಾರಿಕೆಗೆ ಸಂಬಂಧಿಸಿದಂತೆ ನಮಗೆ ಯಾವುದೇ ಪತ್ರ ಕಂಡುಬಂದಿಲ್ಲ.
ಆದರೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಏಪ್ರಿಲ್ 30, 2024 ರಂದು ಹೊರಡಿಸಿದ ಎರಡು ಪತ್ರಗಳನ್ನು ನಾವು ಕಂಡುಕೊಂಡಿದ್ದೇವೆ. ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಮಹಾರಾಷ್ಟ್ರದ ಒಟ್ಟು 4 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅದರಲ್ಲಿ ಘೋಷಿಸಲಾಗಿದೆ. ಎರಡನೇ ಪತ್ರದಲ್ಲಿ ದೇವೇಂದ್ರ ಯಾದವ್ ಅವರನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.
ಇದರ ನಂತರ, ನಾವು ವೈರಲ್ ಪತ್ರವನ್ನು ಕಾಂಗ್ರೆಸ್ ಪಕ್ಷ ಹೊರಡಿಸಿದ ಪತ್ರದೊಂದಿಗೆ ಹೋಲಿಸಿದ್ದೇವೆ. ಎರಡು ಪತ್ರಗಳ ನಡುವೆ ಕೆಲವು ವ್ಯತ್ಯಾಸಗಳನ್ನು ನಾವು ಕಂಡುಕೊಂಡಿದ್ದೇವೆ, ಇದರಿಂದಾಗಿ ವೈರಲ್ ಪತ್ರವು ನಕಲಿ ಎಂದು ಕಂಡುಬಂದಿದೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಲೋಕಸಭಾ ಅಭ್ಯರ್ಥಿಗಳನ್ನಾಗಿ ಮಾಡುವ ಬಗ್ಗೆ ಇತ್ತೀಚಿನ ಸುದ್ದಿ ವರದಿಗಳು ಅಮೇಥಿ-ರಾಯ್ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ನಿಗೂಢವಾಗಿದೆ ಎಂದು ಹೇಳಲಾಗಿದೆ.
ನಮ್ಮ ತನಿಖೆಯ ಭಾಗವಾಗಿ ನಾವು ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಪ್ಲಾಟ್ ಫಾರಂ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಅವರನ್ನು ಸಂಪರ್ಕಿಸಿದ್ದೇವೆ. ಅವರು ಈ ಪತ್ರವನ್ನು ನಕಲಿ ಎಂದು ಹೇಳಿದ್ದಾರೆ.
Conclusion
ಅಮೇಥಿ ಮತ್ತು ರಾಯ್ ಬರೇಲಿಯ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸುವ ಈ ಪತ್ರ ನಕಲಿ ಎಂದು ನಮ್ಮ ತನಿಖೆಯಲ್ಲಿ ದೊರೆತ ಪುರಾವೆಗಳಿಂದ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷವು ಈ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಿಸಿಲ್ಲ.
Also Read: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆಯೇ?
Result: False
Our Sources
X post By INC India, Dated: April 30, 2024
Telephonic Conversation with Congress Leader Supriya Shrinet
(ಈ ಲೇಖನವವನ್ನು ಮೊದಲು ನ್ಯೂಸ್ ಚೆಕರ್ ಹಿಂದಿಯಲ್ಲಿ ಪ್ರಕಟಿಸಲಾಗಿದ್ದು, ಅದು ಇಲ್ಲಿದೆ)
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.