Authors
Claim
ದಿಲ್ಲಿಯಲ್ಲಿ ರೈತರು ಫೆಬ್ರವರಿ 13, 2024ರಂದು ಪ್ರಮುಖ ಬೇಡಿಕೆಗಳೊಂದಿಗೆ ದಿಲ್ಲಿ ಚಲೋ ನಡೆಸಿದ್ದಾರೆ. ವಿವಿಧ ರಾಜ್ಯಗಳಿಂದ ಆಗಮಿಸಿದ ರೈತರನ್ನು ತಡೆಯಲು ಬಿಗು ಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್ ಚಿತ್ರವೊಂದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇದನ್ನೇ ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಮಾಡಿದ ಎಕ್ಸ್ ಪೋಸ್ಟ್ ನಲ್ಲೂ ಹಾಕಿಕೊಂಡಿದ್ದಾರೆ. ಇದರಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಗಾಗಿ ಅಳವಡಿಸಿದ ಬ್ಯಾರಿಕೇಡ್ ಗಳನ್ನು ಕಾಣಬಹುದು. ಈ ಚಿತ್ರವು ಇತ್ತೀಚಿನ ರೈತರ ಹೋರಾಟದಿಂದ ಬಂದಿದೆ ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಈ ಬ್ಯಾರಿಕೇಡ್ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿಪಡಿಸಲು ಸರ್ಕಾರ ಕಾನೂನು ರೂಪಿಸಬೇಕು ಎಂಬುದು ರೈತರ ಅತಿದೊಡ್ಡ ಬೇಡಿಕೆಯಾಗಿದೆ. ಅಮೃತಸರ-ದಿಲ್ಲಿ-ರಾಷ್ಟ್ರೀಯ ಹೆದ್ದಾರಿಯ ಮೂಲಕ ಹರಿಯಾಣವನ್ನು ಪ್ರವೇಶಿಸಲು ರೈತರು ತಯಾರಿ ನಡೆಸುತ್ತಿದ್ದರೆ, ಅಂಬಾಲಾದ ಶಂಭು ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಪಂಜಾಬ್ ಸೇರಿದಂತೆ ಇತರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ರೈತರು ದಿಲ್ಲಿ ಮೆರವಣಿಗೆಯಲ್ಲಿ ಸೇರುತ್ತಿದ್ದಾರೆ.
Fact
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಚಿತ್ರವನ್ನು ನಾವು ತನಿಖೆ ಮಾಡಲು ಪ್ರಾರಂಭಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಸಹಾಯದಿಂದ ನಾವು ಚಿತ್ರವನ್ನು ಪರಿಶೀಲಿಸಿದ್ದೇವೆ. ಮಾಡಿದ್ದೇವೆ. ಹುಡುಕಾಟದ ಸಮಯದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಫೆಬ್ರವರಿ 6, 2021 ರಂದು ಎಕ್ಸ್ ನಲ್ಲಿ ಅಪ್ಲೋಡ್ ಮಾಡಿದ ಈ ಚಿತ್ರವನ್ನು ನಾವು ಕಂಡುಕೊಂಡಿದ್ದೇವೆ.
Also Read: ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ ನಿಜವೇ?
ಹೆಚ್ಚಿನ ತನಿಖೆಯ ನಂತರ, ಫೆಬ್ರವರಿ 3, 2021 ರಂದು ಇಂಡಿಯಾ ಟುಡೇ ಪ್ರಕಟಿಸಿದ ಲೇಖನದಲ್ಲಿ ಇದೇ ಚಿತ್ರವನ್ನು ಅಪ್ಲೋಡ್ ಮಾಡಲಾಗಿದೆ ಎಂದು ನಾವು ಗುರುತಿಸಿದ್ದೇವೆ. ಚಿತ್ರದೊಂದಿಗೆ ನೀಡಲಾದ ಶೀರ್ಷಿಕೆಯ ಪ್ರಕಾರ, ಈ ಚಿತ್ರವು ಗಾಜಿಪುರ ಗಡಿಯಲ್ಲಿ ಮಾಡಲಾಗಿದ್ದ ಬಿಗು ಬಂದೋಬಸ್ತ್ ನದ್ದಾಗಿದೆ.
ಈ ತನಿಖೆಯ ಪ್ರಕಾರ, ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ ನಡೆಸಲಾದ ಬಿಗು ಬಂದೋಬಸ್ತ್ ಕುರಿತಾದ್ದಾಗಿದೆ. ಆದ್ದರಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಚಿತ್ರ ಹಳೆಯದು ಎಂದು ನಮ್ಮ ತನಿಖೆಯಿಂದ ಸ್ಪಷ್ಟವಾಗಿದೆ.
Also Read: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎನ್ನುವುದು ನಿಜವೇ?
Result: Missing Context
Our Sources
Tweet made by Priyanka Gandhi Vadra Dated: February 6, 2021
Report published by India Today Dated: February 3, 2021
(ಈ ಲೇಖನವನ್ನು ಮೊದಲು ನ್ಯೂಸ್‌ಚೆಕರ್ ಪಂಜಾಬಿಯಲ್ಲಿ ಪ್ರಕಟಿಸಲಾಗಿದ್ದು, ಅದು ಇಲ್ಲಿದೆ)
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.