Tuesday, April 15, 2025

Fact Check

Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?

Written By Kushel Madhusoodan, Translated By Ishwarachandra B G, Edited By Pankaj Menon
May 13, 2024
banner_image

Claim
ರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದಾರೆ

Fact
ವೈರಲ್‌ ವೀಡಿಯೋ,  ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭದ್ದಾಗಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆ ನಿಮಿತ್ತ ನಾಮಪತ್ರ ಸಲ್ಲಿಕೆ ಬಳಿಕ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ದೇಶದಲ್ಲಿ ನಾಲ್ಕನೇ ಹಂತದ ಮತದಾನ ನಡೆಯುತ್ತಿರುವ ಹೊತ್ತಿನಲ್ಲಿ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ. 10 ರಾಜ್ಯಗಳ 96 ಲೋಕಸಭಾ ಕ್ಷೇತ್ರಗಳಿಗೆ ಮೇ 13 2024ರಂದು ಮತದಾನ ನಡೆದಿದೆ.

Also Read: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಗೆ ಜನ ಚಪ್ಪಲಿ ಪೂಜೆ ಮಾಡಿದ್ದಾರೆ ಎಂದ ಈ ವೀಡಿಯೋ ನಿಜವೇ?

ಎಕ್ಸ್ ಪೋಸ್ಟ್ ನ ಆರ್ಕೈವ್ ಮಾಡಿದ ಲಿಂಕ್‌ ಇಲ್ಲಿ ನೋಡಬಹುದು.

Fact Check/Verification

ನ್ಯೂಸ್ ಚೆಕರ್ “Rahul Gandhi Ayodhya temple” ಕ್ಕಾಗಿ ಕೀವರ್ಡ್ ಹುಡುಕಾಟವನ್ನು ನಡೆಸಿತು, ಆದರೆ ಅಂತಹ ಭೇಟಿಯ ಬಗ್ಗೆ ಇತ್ತೀಚಿನ ಯಾವುದೇ ಸುದ್ದಿ ವರದಿಗಳು ಕಂಡುಬಂದಿಲ್ಲ.

ನಂತರ ನಾವು ವೀಡಿಯೋದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದ್ದೇವೆ, ಇದು ಫೆಬ್ರವರಿ 3, 2024 ರಂದು ಬಿಜೆಪಿ ಗುಜರಾತ್ ನ ಅಧಿಕೃತ ಖಾತೆಯಿಂದ ಅಪ್ಲೋಡ್ ಮಾಡಲಾದ ಈ ಇನ್ಸ್ಟಾಗ್ರಾಮ್ ರೀಲ್ಗೆ ನಮ್ಮನ್ನು ಕರೆದೊಯ್ಯಿತು, “ಸನಾತನದ ಧಾಮ್ ದೇವಗಢ, ಬಾಬಾ ವೈದ್ಯನಾಥ ಧಾಮದಲ್ಲಿ @rahulgandhi ಮುಂದೆ ಮೋದಿ-ಮೋದಿ ಘೋಷಣೆಗಳನ್ನು ಕೂಗಲಾಗಿದೆ” ಎಂದು ಹೇಳಲಾಗಿದೆ.

Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?
ಬಿಜೆಪಿ ಗುಜರಾತ್ ಪೋಸ್ಟ್

ವೈರಲ್‌ ವೀಡಿಯೋಕ್ಕೂ, ಬಿಜೆಪಿ ಪೋಸ್ಟ್ ಮಾಡಿರುವ ವೀಡಿಯೋಕ್ಕೂ ಸಾಮ್ಯತೆ ಇರುವುದನ್ನು ನಾವಿಲ್ಲಿ ಕಂಡುಕೊಂಡಿದ್ದೇವೆ.

ಆ ಬಳಿಕ ಕೀವರ್ಡ್ ಹುಡುಕಾಟವು ಫೆಬ್ರವರಿ 3-4, 2024 ರ ಅನೇಕ ಸುದ್ದಿ ವರದಿಗಳಿಗೆ ನಮ್ಮನ್ನು ಕರೆದೊಯ್ಯಿತು, ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಲ್ಲಿ ಜಾರ್ಖಂಡ್ ನ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಇಲ್ಲಿ, ಮತ್ತು ಇಲ್ಲಿ ವರದಿಗಳನ್ನು ಕಾಣಬಹುದು. “ರಾಹುಲ್ ಗಾಂಧಿ ಅವರು ಶಿವನಿಗೆ ಸಮರ್ಪಿತವಾದ ದಿಯೋಗಢದ ಪ್ರಾಚೀನ ದೇವಾಲಯಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಪ್ರಾರ್ಥನೆ ಮತ್ತು ಆಚರಣೆಗಳಲ್ಲಿ ಭಾಗವಹಿಸಿದರು” ಎಂದು ಫೆಬ್ರವರಿ 4, 2024 ರ ಹಿಂದೂಸ್ಥಾನ್‌ ಟೈಮ್ಸ್ ವರದಿಯಲ್ಲಿ ತಿಳಿಸಲಾಗಿದೆ.

Also Read: ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?

“ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 02 ರಂದು ಜಾರ್ಖಂಡ್ ತಲುಪಿದೆ. ಗುಲಾಬಿ ಧೋತಿ ಮತ್ತು ಶ್ರೀಗಂಧದ ಪುಡಿಯನ್ನು ಹಣೆಗೆ ಧರಿಸಿದ ರಾಹುಲ್ ಗಾಂಧಿ ಫೆಬ್ರವರಿ 03 ರಂದು ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಜಾರ್ಖಂಡ್ ದಿಯೋಗಢದಲ್ಲಿರುವ ಪ್ರಸಿದ್ಧ ಜ್ಯೋತಿರ್ಲಿಂಗವನ್ನು ರಾಹುಲ್ ಗಾಂಧಿ ಪ್ರವೇಶಿಸುತ್ತಿದ್ದಂತೆಯೇ ದೊಡ್ಡ ಘೋಷಣೆಗಳು ಪ್ರಾರಂಭವಾದವು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಘೋಷಣೆಗಳನ್ನು ಕೂಗಿದರು, ಆದರೆ ಇದ್ದಕ್ಕಿದ್ದಂತೆ ಅದು ‘ಮೋದಿ-ಮೋದಿ’ ಘೋಷಣೆಗಳಾಗಿ ಮಾರ್ಪಟ್ಟಿತು” ಎಂದು ಫೆಬ್ರವರಿ 3, 2024 ರ ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ತಿಳಿಸಲಾಗಿದೆ.

Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?
ಟೈಮ್ಸ್ ಆಫ್‌ ಇಂಡಿಯಾ ವರದಿ

ಇದು ವೈರಲ್ ವೀಡಿಯೋ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಸಂಬಂಧಿಸಿದ್ದಲ್ಲ ಎಂದು ದೃಢಪಡಿಸುತ್ತದೆ. ನಾಮಪತ್ರ ಸಲ್ಲಿಸುವಾಗ ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಭಾವ ರಾಬರ್ಟ್ ವಾದ್ರಾ ಇದ್ದರು ಎಂದು ವರದಿಯಾಗಿದೆ.

Conclusion

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಿದ್ದಾರೆ ಎಂಬ ಹೇಳಿಕೆ ಸುಳ್ಳು. ವೈರಲ್‌ ವೀಡಿಯೋ,  ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭದ್ದಾಗಿದೆ.

Also Read: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ

Result: False

Our Sources:
Instagram reel, BJP Gujarat, Dated: February 3, 2024

Report By Hindustan Times, Dated: February 4, 2024

Report By Times of India, February 3, 2024

(ಈ ಲೇಖನವನ್ನು ಮೊದಲು ನ್ಯೂಸ್‌ಚೆಕರ್ ಇಂಗ್ಲಿಷ್‌ ನಲ್ಲಿ ಪ್ರಕಟಿಸಲಾಗಿದ್ದು, ಅದು ಇಲ್ಲಿದೆ)


ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.

image
ನೀವು ಯಾವುದೇ ದಾವೆಯ ಸತ್ಯಾಸತ್ಯತೆ ಪರಿಶೀಲಿಸ ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಲು ಅಥವಾ ದೂರು ಸಲ್ಲಿಸಲು ಬಯಸಿದರೆ, ನಮಗೆ ವಾಟ್ಸಾಪ್ ಮಾಡಿರಿ +91-9999499044 ಅಥವಾ ನಮಗೆ ಇಮೇಲ್ ಮಾಡಿರಿ checkthis@newschecker.in​. ನೀವು ನಮ್ಮನೊಂದಿಗೆ ಸಂಪರ್ಕ ಮಾಡಬಹುದು ಮತ್ತು ಫಾರ್ಮ್ ಅನ್ನು ನೀಡಬಹುದು.
Newchecker footer logo
Newchecker footer logo
Newchecker footer logo
Newchecker footer logo
About Us

Newchecker.in is an independent fact-checking initiative of NC Media Networks Pvt. Ltd. We welcome our readers to send us claims to fact check. If you believe a story or statement deserves a fact check, or an error has been made with a published fact check

Contact Us: checkthis@newschecker.in

17,789

Fact checks done

FOLLOW US
imageimageimageimageimageimageimage
cookie

ನಮ್ಮ ವೆಬ್‌ಸೈಟ್ ಕುಕೀಗಳನ್ನು ಬಳಸುತ್ತದೆ

ನಾವು ಕುಕೀಗಳನ್ನು ಮತ್ತು ಸಮಾನ ತಂತ್ರಗಳನ್ನು ವ್ಯಕ್ತಿಗೆ ತಕ್ಕಂತೆ ಮಾಡಿಕೊಳ್ಳಲು, ವಿಜ್ಞಾಪನಗಳನ್ನು ರೂಪಿಸಲು ಮತ್ತು ಅಳತೆಗೆ ಸಹಾಯ ಮಾಡಲು, ಹೆಚ್ಚು ಉತ್ತಮ ಅನುಭವ ಒದಗಿಸಲು ಸಹಾಯ ಮಾಡುತ್ತದೆ. 'ಸರಿ' ಅಥವಾ ಕುಕೀ ಆದರಿದ ಆಯ್ಕೆಯಲ್ಲಿ ಒಂದು ಆಯ್ಕೆಯನ್ನು ಮಾಡಿ, ನೀವು ಇದನ್ನು ಒಪ್ಪಿಕೊಳ್ಳುತ್ತೀರಿ, ನಮ್ಮ ಕುಕೀ ನಿಯಮಗಳಲ್ಲಿ ವಿವರಿಸಿದ ಪ್ರಕಾರ.