Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

ಗ್ಯಾಂಗ್‌ ವಾರ್‌ ಉಡುಪಿ

Authors

Claim
ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆ

Fact
ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿಲ್ಲ. ವ್ಯಕ್ತಿಯೊಬ್ಬ ಗಾಯಗೊಂಡಿದ್ದು ಚೇತರಿಸಿಕೊಂಡಿದ್ದಾನೆ, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಉಡುಪಿಯಲ್ಲಿ ನಡೆದ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ.

ವಾಟ್ಸಾಪ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಉಡುಪಿಯಲ್ಲಿ ಬ್ಯಾರಿ ಬ್ಯಾರಿ ಗ್ಯಾಂಗ್ವಾರ್ ಮರ್ಡರ್” ಎಂದಿದೆ.

Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ ಲೈನ್‌ (+91-9999499044) ಗೆ ಮನವಿ ಬಂದಿದ್ದು ಅದನ್ನು ಸ್ವೀಕರಿಸಲಾಗಿದೆ.

Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

Also Read: ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ?

Fact Check/Verification

ಸತ್ಯಶೋಧನೆಗಾಗಿ ನಾವು ಗೂಗಲ್‌ ಕೀವರ್ಡ್ ಸರ್ಚ್ ನಡೆಸಿದ್ದೇವೆ. ಈ ವೇಳೆ ಮಾಧ್ಯಮ ವರದಿಗಳು ಕಂಡುಬಂದಿವೆ.

ಮೇ 25, 2024ರ ಪಬ್ಲಿಕ್‌ ಟಿವಿ ವರದಿ ಪ್ರಕಾರ “ ಉಡುಪಿ ನಗರದ ಶಾರದಾ ಮಂಟಪ ಜಂಕ್ಷನ್ ನಲ್ಲಿ ಯುವಕರ ಗುಂಪಿನ ನಡುವೆ ಗ್ಯಾಂಗ್ ವಾರ್ ನಡೆದಿದೆ. ವ್ಯವಹಾರಕ್ಕೆ ಸಂಬಂಧಿಸಿದ ತಗಾದೆ ಮಾರಾಮಾರಿಯವರೆಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಸಾರ್ವಜನಿಕರು ಓಡಾಟ ಮಾಡುತ್ತಿದ್ದ ಸಂದರ್ಭದಲ್ಲೇ ತಲ್ವಾರ್ ತೆಗೆದು ಹೊಡೆದಾಟ ಮಾಡಲು ಯುವಕರು ಯತ್ನಿಸಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿಯೊಬ್ಬ ಘಟನೆಯ ಸಂಪೂರ್ಣ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.” ಎಂದಿದೆ.

Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?
ಪಬ್ಲಿಕ್‌ ಟಿವಿ ವರದಿ

25 ಮೇ 2024 ವಾರ್ತಾ ಭಾರತಿ ವರದಿ ಪ್ರಕಾರ “ಉಡುಪಿ-ಮಣಿಪಾಲ ರಸ್ತೆಯ ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ” ಎಂದಿದೆ.

26 ಮೇ 2024ರ ಪ್ರಜಾವಾಣಿ ವರದಿ ಪ್ರಕಾರ “ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಒಂದೇ ಗುಂಪಿನ 2 ತಂಡಗಳ ನಡುವೆ ಈಚೆಗೆ ನಡೆದ ಗ್ಯಾಂಗ್ ವಾರ್ ಘಟನೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ರಸ್ತೆ ಮಧ್ಯೆಯೇ ಕಾರು ನಿಲ್ಲಿಸಿ ಮಾರಕಾಸ್ತ್ರಗಳಿಂದ ಹೊಡೆದಾಡುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದುಮಾಡುತ್ತಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ನಾಗರಿಕರು ಒತ್ತಾಯಿಸಿದ್ದಾರೆ” ಎಂದಿದೆ.

Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?
ಪ್ರಜಾವಾಣಿ ವರದಿ

ಯಾವುದೇ ವರದಿಗಳಲ್ಲೂ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ ನಡೆದ ಬಗ್ಗೆ ಉಲ್ಲೇಖಗಳು ಕಂಡುಬಂದಿಲ್ಲ. ಈ ಘಟನೆ ಕುರಿತ ವಿವರಗಳನ್ನು ವಿವಿಧ ಮಾಧ್ಯಮಗಳು ವರದಿ ಮಾಡಿದ್ದು ಅವುಗಳು ಇಲ್ಲಿ, ಇಲ್ಲಿವೆ

ಇದೇ ವೇಳೆ ನಮಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರು ಮಾಧ್ಯಮಕ್ಕೆ ಬಿಡುಗಡೆ ಮಾಡಿದ ಹೇಳಿಕೆ ಲಭ್ಯವಾಗಿದ್ದು ಇದರಲ್ಲಿ ವಿವರಗಳನ್ನು ನೀಡಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ನಾವು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಟಿ. ಸಿದ್ಧಲಿಂಗಪ್ಪ ಅವರನ್ನು ಸಂಪರ್ಕಿಸಿದ್ದು, ಅವರು ನ್ಯೂಸ್‌ಚೆಕರ್ ನೊಂದಿಗೆ ಮಾತನಾಡಿ “ಗ್ಯಾಂಗ್‌ ವಾರ್ ವೇಳೆ ಓರ್ವ ವ್ಯಕ್ತಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆದು ಚೇತರಿಸಿದ್ದಾನೆ. ಯಾವುದೇ ಕೊಲೆ ನಡೆದಿಲ್ಲ, ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪಬ್ಲಿಕ್‌ ಟಿವಿಯ ಉಡುಪಿ ಜಿಲ್ಲಾ ವರದಿಗಾರ ದೀಪಕ್‌ ಜೈನ್ ಅವರನ್ನೂ ನ್ಯೂಸ್‌ಚೆಕರ್ ಸಂಪರ್ಕಿಸಿದ್ದು, “ಗ್ಯಾಂಗ್‌ವಾರ್ ನಲ್ಲಿ ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಯಾರೂ ಮೃತಪಟ್ಟಿಲ್ಲ, ಪ್ರಕರಣ ಸಂಬಂಧಿಸಿದ ವ್ಯಕ್ತಿಗಳನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

Conclusion

ಉಡುಪಿಯಲ್ಲಿ ನಡೆದ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆ ಎನ್ನುವ ಹೇಳಿಕೆ ತಪ್ಪಾಗಿದೆ. ಪ್ರಕರಣದಲ್ಲಿ ಯಾರೂ ಸತ್ತಿಲ್ಲ ಎಂದು ಸತ್ಯಶೋಧನೆಯಲ್ಲಿ ತಿಳಿದುಬಂದಿದೆ.

Result: False

Our Sources

Report By Public Tv, Dated: May 25, 2024
Report By Varthabharati, Dated: May 25, 2024
Report By Prajavani, Dated: May 26, 2024
X post By Udupi Superintendent of Police, Dated: May 25, 2024
Conversation with S.T. Siddalingappa, Additional Superintendent of Police, Udupi
Conversation with Deepak Jain, District Correspondent Public TV, Udupi


ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.


Authors