Authors
ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ರಾಹುಲ್ ಗಾಂಧಿ ಚೀನದ ಸಂವಿಧಾನ ಹಿಡಿದು ಕಾರ್ಯಕ್ರಮಕ್ಕೆ ಹೋಗುತ್ತಾರೆ, ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವ ಹೇಳಿಕೆಗಳು ಈ ವಾರ ಹರಿದಾಡಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಸುಳ್ಳು ಸುದ್ದಿಗಳೇ ಹೆಚ್ಚಾಗಿದ್ದವು. ಈ ಕುರಿತು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸತ್ಯಾಸತ್ಯತೆಯನ್ನು ತೆರೆದಿಟ್ಟಿದೆ. ಇದು ಹೊರತಾಗಿ ಆರೋಗ್ಯ ವಿಚಾರದಕ್ಕೆ ಸಂಬಂಧಿಸಿ ತಲೆ ದಿಂಬು ಇಲ್ಲದೆ ಮಲಗುವುದರಿಂದ ರಕ್ತಪರಿಚಲನೆ ಸುಧಾರಿಸುತ್ತದೆ ಎಂಬ ಹೇಳಿಕೆಯೂ ಇತ್ತು. ಆದರೆ ಇದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳು ಇಲ್ಲ ಎಂದು ಸತ್ಯಶೋಧನೆಯಲ್ಲಿ ಕಂಡುಕೊಳ್ಳಲಾಗಿದೆ.
ರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನ ಕೊಂಡೊಯ್ಯುತ್ತಾರೆಯೇ? ಸತ್ಯ ಇಲ್ಲಿದೆ
ರಾಹುಲ್ ಗಾಂಧಿ ಅವರು ಸಂವಿಧಾನದ ಕೆಂಪು ಬಣ್ಣದ ಪಾಕೆಟ್ ಪುಸ್ತಕವನ್ನು ವೇದಿಕೆಯ ಮೇಲೆ ಹಿಡಿದಿರುವ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಚಿತ್ರದ ಬಗ್ಗೆ ಪ್ರಶ್ನೆಯೂ ಎದ್ದಿದ್ದು, “ರಾಹುಲ್ ಗಾಂಧಿ ಚೀನಾದ ಸಂವಿಧಾನವನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಾರೆಯೇ? ಏಕೆಂದರೆ ಚೀನಾದ ಸಂವಿಧಾನದ ಬಣ್ಣ ಕೆಂಪು.” ಎಂದು ಹೇಳಲಾಗಿದೆ. ಆದರೆ ಸತ್ಯಶೋಧನೆಯಲ್ಲಿ, ರಾಹುಲ್ ಗಾಂಧಿ ವೇದಿಕೆಯಲ್ಲಿ ತೋರಿಸುತ್ತಿರುವ ಪುಸ್ತಕ ಭಾರತೀಯ ಸಂವಿಧಾನದ ಪಾಕೆಟ್ ಬುಕ್ ಆವೃತ್ತಿಯಾಗಿದೆ. ಅವರು ಚೀನ ಸಂವಿಧಾನವನ್ನು ತೋರಿಸಿದ್ದಲ್ಲ ಎಂಬುದು ನಮ್ಮ ತನಿಖೆಯಲ್ಲಿ ದೊರೆತ ಪುರಾವೆಗಳಿಂದ ಸ್ಪಷ್ಟವಾಗಿದೆ. ಈ ಕುರಿತ ಹೆಚ್ಚಿನ ವಿವರಗಳನ್ನು ಇಲ್ಲಿ ಓದಿ
ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆಯೇ, ಸತ್ಯ ಏನು?
ವಯನಾಡ್ ನಲ್ಲಿ ಭಾರತದ ತ್ರಿವರ್ಣ ಧ್ವಜದ ಬಗ್ಗೆ ಅವಮಾನ ಮಾಡಲಾಗಿದೆ, ಜನ ನಿಬಿಡ ರಸ್ತೆಯಲ್ಲಿ ವಾಹನಗಳನ್ನು ತ್ರಿವರ್ಣ ಧ್ವಜದ ಮೇಲೆಯೇ ಚಲಾಯಿಸಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸತ್ಯಶೋಧನೆ ನಡೆಸಿದ ವೇಳೆ ಇದು ವಯನಾಡಿನದ್ದಲ್ಲ, ಇದು ಹಳೆಯ ವೀಡಿಯೋ ಆಗಿದ್ದು, ಪಾಕಿಸ್ಥಾನದ ಕರಾಚಿಯಿಂದ ಬಂದಿದೆ ಎಂದು ಗೊತ್ತಾಗಿದೆ. ಈ ಕುರಿತ ಹೆಚ್ಚಿನ ವಿವರಗಳನ್ನು ಇಲ್ಲಿ ಓದಿ
ಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು ಎಂದ ವೀಡಿಯೋ ನಿಜಕ್ಕೂ ಎಲ್ಲಿಯದ್ದು?
ಮುಂಬೈಯಲ್ಲಿ, ಹರಿಯಾಣಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರಾಲಿಯಲ್ಲಿ ಖಾಲಿ ಕುರ್ಚಿಗಳಿದ್ದು ಜನರು ಇರಲಿಲ್ಲ ಎಂದು ಹೇಳುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಜನ ಇರಲಿಲ್ಲ ಎಂದ ವೀಡಿಯೋ ಮಹಾರಾಷ್ಟ್ರದ ಪುಣೆಯದ್ದು ಎಂದು ತಿಳಿದು ಬಂದಿದೆ. ಈ ಕುರಿತ ಹೆಚ್ಚಿನ ವಿವರಗಳನ್ನು ಇಲ್ಲಿ ಓದಿ
ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ನಿಜವೇ?
ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳುತ್ತಿದ್ದಾರೆ ಎಂದು ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ. ವೀಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು “ಕಾಂಗ್ರೆಸ್ ಕಥೆ ಮುಗಿದಿದೆ, ಕಾಂಗ್ರೆಸ್ ಸತ್ತಿದೆ ಮತ್ತು ಕಾಂಗ್ರೆಸ್ ಈಗ ಎಲ್ಲಿಯೂ ಕಾಣಿಸುವುದಿಲ್ಲ” ಎಂದು ಹೇಳುತ್ತಿರುವುದು ಕಂಡುಬರುತ್ತದೆ. ಸತ್ಯಶೋಧನೆಯಲ್ಲಿ ಕಂಡುಬಂದ ಪ್ರಕಾರ, ಇದೊಂದು ಕ್ಲಿಪ್ಡ್ ವೀಡಿಯೋ ಆಗಿದೆ ಎಂದು ಕಂಡುಬಂದಿದೆ. ಈ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ಓದಿ
ತಲೆದಿಂಬು ಇಲ್ಲದೆ ಮಲಗುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆಯೇ?
ತಲೆದಿಂಬು ಇಲ್ಲದೆ ಮಲಗುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಆದರೆ ಸತ್ಯಶೋಧನೆ ವೇಳೆ ಕಂಡುಬಂದಂತೆ ತಲೆದಿಂಬು ಇಲ್ಲದೆ ಮಲಗುವುದರಿಂದ ದೇಹದಲ್ಲಿ ರಕ್ತಪರಿಚಲನೆ ಸುಧಾರಿಸುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ಎಂದು ಗೊತ್ತಾಗಿದೆ. ಈ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ಓದಿ
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.