ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಹಿಂದೂಗಳ ಮೇಲೆ ದಾಳಿ, ಹರಿದ್ವಾರದಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಕೊಂದಿದ್ದಾನೆ, ವಕ್ಫ್ ಮಸೂದೆ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಎಂಬ ಕೋಮು ಹೇಳಿಕೆಗಳು ಈ ವಾರ ಪ್ರಮುಖವಾಗಿ ಹರಿದಾಡಿವೆ. ಇದರೊಂದಿಗೆ ಸುಧಾ ಮೂರ್ತಿ ಹೂಡಿಕೆ ವೇದಿಕೆಯನ್ನು ಪ್ರಚಾರ ಮಾಡುತ್ತಿರುವ ಎಐ ವೀಡಿಯೋ, ಕೆಟಿಗ ಧೋನಿ ಬಿಜೆಪಿ ಸೇರ್ಪಡೆ? ಪ್ರಧಾನಿ ಮೋದಿ ಜೊತೆಗಿನ ಎಐ ಚಿತ್ರ, ಸಕ್ಕರೆ ಬಳಸಿ ಮನೆಯಲ್ಲೇ ಗರ್ಭಧಾರಣೆ ಪರೀಕ್ಷೆ ನಡೆಸಬಹುದು ಎಂಬ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಶೋಧ ನಡೆಸಿದಾಗ, ಇವುಗಳು ನಿಜವಾದ್ದಲ್ಲ ಎಂದು ಗೊತ್ತಾಗಿದೆ. ಈ ವಾರ ಪ್ರಮುಖವಾಗಿ ಹರಿದಾಡಿದ ಹೇಳಿಕೆಗಳ ಕುರಿತ ವಾರದ ನೋಟ ಇಲ್ಲಿದೆ.

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಹಿಂದೂಗಳ ಮೇಲೆ ದಾಳಿ ಎನ್ನುವುದು ನಿಜವಲ್ಲ
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ಸತ್ಯಶೋಧನೆ ನಡೆಸಿದಾಗ, ವೈರಲ್ ವೀಡಿಯೋ ಬಾಂಗ್ಲಾದೇಶದ ಸಿಲ್ಹೆಟ್ ಎಂಬಲ್ಲಿ ಪ್ರತಿಭಟನೆ ಸಂದರ್ಭ ನಡೆದ ಹಿಂಸಾಚಾರದ್ದಾಗಿದೆ ಎಂದು ಗೊತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ

ಹರಿದ್ವಾರದಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಕೊಂದಿದ್ದಾನೆ ಎನ್ನುವ ಹೇಳಿಕೆ ಸುಳ್ಳು!
ಹರಿದ್ವಾರದಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಕೊಂದಿದ್ದಾನೆ ಎಂಬಂತೆ ಹೇಳಿಕೆಯೊಂದನ್ನು ವೀಡಿಯೋದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಆದರೆ ಸತ್ಯಶೋಧನೆ ನಡೆಸಿದಾಗ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಕೊಂದಿದ್ದಾನೆ ಎಂಬ ಹೇಳಿಕೆ ಸುಳ್ಳಾಗಿದೆ. ಮುಸ್ಲಿಂ ಸಮುದಾಯದ ಯುವಕನೊಬ್ಬ ಅದೇ ಸಮುದಾಯದ ಯುವತಿಯನ್ನು ಹತ್ಯೆ ಮಾಡಿದ ಘಟನೆ ಇದಾಗಿದೆ. ಈ ಕುರಿತ ವರದಿ ಇಲ್ಲಿದೆ

ಸುಧಾ ಮೂರ್ತಿ ಹೂಡಿಕೆ ವೇದಿಕೆಯನ್ನು ಪ್ರಚಾರ ಮಾಡುತ್ತಿರುವ ವೀಡಿಯೋ ನಕಲಿ
ಇನ್ಫೋಸಿಸ್ ಫೌಂಡೇಶನ್‌ನ ಸ್ಥಾಪಕ-ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಹೂಡಿಕೆ ವೇದಿಕೆಯನ್ನು ಪ್ರಚಾರ ಮಾಡುತ್ತಿರುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ಸತ್ಯಶೋಧನೆ ನಡೆಸಿದಾಗ, ಇದು ಎಐ ನಿಂದ ಮಾಡಿದ್ದು ಎಂದು ಗೊತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ

ಕ್ರಿಕೆಟಿಗ ಧೋನಿ ಬಿಜೆಪಿ ಸೇರ್ಪಡೆ? ಪ್ರಧಾನಿ ಮೋದಿ ಜೊತೆಗಿನ ವೈರಲ್ ಚಿತ್ರ ನಿಜವಾದ್ದಲ್ಲ!
ಕ್ರಿಕೆಟಿಗ ಧೋನಿ ಪ್ರಧಾನಿ ಮೋದಿ ಅವರೊಂದಿಗೆ ಕಮಲದ ಚಿತ್ರ ಇರುವ ಕೇಸರಿ ಶಾಲು ಧರಿಸಿ ನಿಂತಿರುವ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರೊಂದಿಗೆ ಧೋನಿ ಧೋನಿ ಬಿಜೆಪಿ ಸೇರಿದ್ದಾರೆ ಎಂದು ಬಳಕೆದಾರರು ಹೇಳಿಕೆಕೊಳ್ಳುತ್ತಿದ್ದಾರೆ. ಆದರೆ ಈ ಚಿತ್ರ ಎಐ ಮೂಲಕ ಮಾಡಿದ್ದು ಎಂದು ಗೊತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ

ವಕ್ಫ್ ಮಸೂದೆ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಎಂದು 2019ರ ವೀಡಿಯೋ ಹಂಚಿಕೆ
ವಕ್ಫ್ ಮಸೂದೆ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಎಂಬಂತೆ ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಸತ್ಯಶೋಧನೆ ನಡೆಸಿದಾಗ, 2019ರಲ್ಲಿ ಗೋರಖ್ ಪುರದಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆಯನ್ನು ವಕ್ಫ್ ವಿರುದ್ಧದ ಪ್ರತಿಭಟನೆ ಎಂಬಂತೆ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತ ವರದಿ ಇಲ್ಲಿದೆ

ಸಕ್ಕರೆ ಬಳಸಿ ಮನೆಯಲ್ಲೇ ಗರ್ಭಧಾರಣೆ ಪರೀಕ್ಷೆ ನಡೆಸಬಹುದೇ?
ಸಕ್ಕರೆಯೊಂದಿಗೆ ಮೂತ್ರ ಬೆರೆಸುವ ವಿಧಾನದೊಂದಿಗೆ ಮಹಿಳೆಯರು ಗರ್ಭಿಣಿಯಾಗಿದ್ದಾರಾ ಇಲ್ಲವೇ ಎಂಬ ಬಗ್ಗೆ ಮನೆಯಲ್ಲೇ ಗರ್ಭಧಾರಣೆ ಪರೀಕ್ಷೆ ನಡೆಸಬಹುದು ಎಂದು ಹೇಳಿಕೊಳ್ಳಲಾಗುತ್ತಿದೆ. ಸತ್ಯಶೋಧನೆ ನಡೆಸಿದಾಗ, ಇದು ನಿಜವಲ್ಲ, ಸಕ್ಕರೆ ಬಳಸಿ ಗರ್ಭಧಾರಣೆ ಪತ್ತೆ ಸಾಧ್ಯವಿಲ್ಲ. ಇದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ ಎಂದು ತಿಳಿದುಬಂದಿದೆ. ಈ ಕುರಿತ ವರದಿ ಇಲ್ಲಿದೆ